Thursday, August 21, 2025
Google search engine

Homeರಾಜ್ಯವಿಧಾನಪರಿಷತ್ ನಲ್ಲೂ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಅಂಗೀಕಾರ

ವಿಧಾನಪರಿಷತ್ ನಲ್ಲೂ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಇದೀಗ ವಿಧಾನ ಪರಿಷತ್ ನಲ್ಲೂ ಅಂಗೀಕಾರವಾಗಿದೆ.

ನಿನ್ನೆ ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಮಂಡಿಸಿದ್ದರು. ನಂತರ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಇದೀಗ ಇಂದು  ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಪರಿಷತ್ ನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಅನ್ನು ಮಂಡಿಸಿದರು. ಚರ್ಚೆ ಬಳಿಕ ಅನುಮೋದನೆ ನೀಡಲಾಯಿತು.

ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಭವಿಷ್ಯದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಈ ತಿದ್ದುಪಡಿಯಲ್ಲಿ ಜಿಬಿಎ ಪಾಲಿಕೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಸ್ಪಷ್ಟನೆ ನೀಡಲಾಗಿದೆ  ಎಂದರು.

RELATED ARTICLES
- Advertisment -
Google search engine

Most Popular