Monday, April 27, 2026
Google search engine

Homeರಾಜ್ಯರಾಜ್ಯದಲ್ಲಿ 225 ವೈದ್ಯರ ನೇಮಕಕ್ಕೆ ಗ್ರೀನ್ ಸಿಗ್ನಲ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ರಾಜ್ಯದಲ್ಲಿ 225 ವೈದ್ಯರ ನೇಮಕಕ್ಕೆ ಗ್ರೀನ್ ಸಿಗ್ನಲ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಹುಬ್ಬಳ್ಳಿ : ರಾಜ್ಯದಲ್ಲಿ 225 ವೈದ್ಯರ ನೇಮಕಕ್ಕೆ ಅನುಮೋದನೆ ದೊರೆತಿದ್ದು, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸರ್ಕಾರಿ ಆಸ್ಪತ್ರೆಗಳಲ್ಲಿ ಜೆನರಿಕ್ ಔಷಧಿ ಮಳಿಗೆ ಮುಂದುವರಿಯಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರಿ ಔಷಧಿಗಳು ಮಾತ್ರ ಇರಬೇಕು. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿ ಕೆಲವರು ಕೋರ್ಟ್ ಗೆ ಹೋಗಿದ್ದಾರೆ ಎಂದರು.

ಇದೇ ವೇಳೆ ಕೋವಿಡ್ ಸಮಯದಲ್ಲಿ ಹಗರಣದ ಬಗ್ಗೆ ನಿವೃತ್ತ ನ್ಯಾ.ಕುನ್ಹಾ ಸಮಿತಿ ವರದಿ ವಿಚಾರವಾಗಿ ಮಾತನಾಡಿದ ಸಚಿವರು, ಕುನ್ಹಾ ಸಮಿತಿ ವರದಿ ಆಧಾರದಲ್ಲಿ ತನಿಖೆ ನಡೆಯುತ್ತಿದ್ದು, ಕೊರೊನಾ ಸಂದರ್ಭದಲ್ಲಿ ಸಾಕಷ್ಟು ದುರುಪಯೋಗಗಳಾಗಿವೆ. ಆದರೆ ಸಾಕ್ಷಿ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular