ಬೆಳಗಾವಿ : ರಾಜ್ಯ ಸರ್ಕಾರದಿಂದ ಜಾರಿ ಮಾಡಲಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಮೂರು ತಿಂಗಳಿಗೊಮ್ಮೆ ಹಣ ಹಾಕುತ್ತೇವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜ್ ರಾಯರೆಡ್ಡಿ, ಗೃಹಲಕ್ಷ್ಮಿ ಹಣವನ್ನು ಮೂರು ತಿಂಗಳಿಗೊಮ್ಮೆ ನೀಡುತ್ತೇವೆ. ನಮ್ಮ ಸರ್ಕಾರ ಆರ್ಥಿಕವಾಗಿ ಸಬಲವಾಗಿದೆ. ಯಾವುದೇ ತೊಂದರೆ ಇಲ್ಲ.
ಜಿಎಸ್ ಟಿ ಕಲೆಕ್ಷನ್ ಆದರೆ ಕೇಂದ್ರ ಸರ್ಕಾರ ಅರ್ಧ ಹಣ ಕೊಡಬೇಕು. ಆದರೆ ಅವರು ಕೋಡುವುದು 1 ತಿಂಗಳು, ಎರಡು ತಿಂಗಳು ತಡವಾಗುತ್ತೆ. ಈ ಮಧ್ಯೆ ಮೂರು ತಿಂಗಳಿಗೊಮ್ಮೆ ಗೃಹ ಲಕ್ಷ್ಮೀ ಹಣ ಕೊಡುತ್ತೇವೆ ಎಂದರು.



