Wednesday, May 21, 2025
Google search engine

Homeರಾಜ್ಯಗೃಹಲಕ್ಷ್ಮೀ ಯೋಜನೆ: ಡಿ.೨೭ ರಿಂದ ೨೯ರ ವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್

ಗೃಹಲಕ್ಷ್ಮೀ ಯೋಜನೆ: ಡಿ.೨೭ ರಿಂದ ೨೯ರ ವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿ.೨೭ ರಿಂದ ೨೯ರ ವರೆಗೆ ಕ್ಯಾಂಪ್‌ಗಳನ್ನು ಆಯೋಜಿಸಲು ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಗೃಹಲಕ್ಷ್ಮೀ ಯೋಜನೆಗೆ ಜುಲೈ ೧೯ ರಂದು ಚಾಲನೆ ನೀಡಲಾಗಿದೆ. ಇದುವರೆಗೂ, ೧.೧೭ ಕೋಟಿ ಮಹಿಳಾ ಕುಟುಂಬ ಮುಖ್ಯಸ್ಥರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ. ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿರುತ್ತದೆ. ಆದ್ದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪ್ ಏರ್ಪಡಿಸಲು ರಾಜ್ಯ ಸರಕಾರ ಸೂಚಿಸಿದೆ.

RELATED ARTICLES
- Advertisment -
Google search engine

Most Popular