ಬೆಂಗಳೂರು : ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದರಿಂದ ವ್ಯಾಪಾರಸ್ಥರು ಕಂಗಾಲಾಗಿದ್ದರು. ಆದರೆ ಈಗ ವಾಣಿಜ್ಯ ತೆರಿಗೆ ಇಲಾಖೆ ಗೊಂದಲ ನಿವಾರಣೆಗೆ ಮುಂದಾಗಿದ್ದು, ತೆರಿಗೆ ನೋಟಿಸ್‌ಗೆ ಗಾಬರಿಯಾಗಬೇಡಿ, ನಿಮ್ಮ ಉತ್ತರ ಅವಲಂಬಿಸಿ ದಂಡ, ಜಿಎಸ್‌ಟಿ ನಿಗದಿಯಾಗಲಿದೆ.
ನೋಟಿಸ್‌ನಲ್ಲಿ ಉಲ್ಲೇಖಿಸಿರುವಷ್ಟು ಜಿಎಸ್‌ಟಿ, ದಂಡ ಪಾವತಿ ಕಡ್ಡಾಯವಲ್ಲ ಎಂದು ಹೇಳಿದೆ. ಕೋರಮಂಗಲದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ‘ಜಿಎಸ್ಟಿ ತಿಳಿಯಿರಿ’ ಸಭೆ ನಡೆಯಿತು. ಸಭೆಯಲ್ಲಿ ವ್ಯಾಪಾರಿಗಳ ಪ್ರಶ್ನೆಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ಮೀರಾ ಪಂಡಿತ್ ಉತ್ತರ ನೀಡಿದರು.
ಮೊದಲ ಹಂತದಲ್ಲಿ ಯುಪಿಎನಲ್ಲಿ ಕೋಟ್ಯಂತರ ರೂಪಾಯಿ ಸ್ವೀಕರಿಸಿದ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ನಮ್ಮ ವ್ಯಾಪ್ತಿಯಲ್ಲಿ ೮೫೦ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದ್ದು ಜಿಎಸ್ಟಿ ವಂಚನೆ ಕುರಿತು ಬೇರೆ ಬೇರೆ ಮೂಲಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಸಂಸ್ಥೆಗಳ ಮಾಹಿತಿ ರೇರಾದಿಂದ ಪಡೆದು ನೋಟಿಸ್ ನೀಡಲಾಗುವುದು ಎಂದು ಹೇಳಿದರು.