Tuesday, May 26, 2026
Google search engine

Homeಕ್ರೀಡೆಮೊದಲ ಕ್ವಾಲಿಫೈಯರ್‌ ನಲ್ಲಿ ಆರ್‌ ಸಿಬಿಗೆ ಜಿಟಿ ಸವಾಲು : ಹೇಗಿದೆ ಹೆಡ್-ಟು-ಹೆಡ್ ದಾಖಲೆ ?

ಮೊದಲ ಕ್ವಾಲಿಫೈಯರ್‌ ನಲ್ಲಿ ಆರ್‌ ಸಿಬಿಗೆ ಜಿಟಿ ಸವಾಲು : ಹೇಗಿದೆ ಹೆಡ್-ಟು-ಹೆಡ್ ದಾಖಲೆ ?

ಧರ್ಮಶಾಲಾ : ಐಪಿಎಲ್ 2026ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಇಂದು (ಮಂಗಳವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ತಂಡಗಳು ಮುಖಾಮುಖಿಯಾಗುತ್ತಿವೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವೆ ಇದುವರೆಗೆ ನಡೆದಿರುವ ಪಂದ್ಯಗಳಲ್ಲಿ ತೀವ್ರ ಪೈಪೋಟಿ ಕಂಡುಬಂದಿದ್ದು, ಇಂದಿನ ಪಂದ್ಯ ಕೂಡ ಭಾರೀ ಕುತೂಹಲ ಮೂಡಿಸಿದೆ.

ಹೆಡ್-ಟು-ಹೆಡ್ ದಾಖಲೆ

ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೆ ಒಟ್ಟು 8 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಎರಡೂ ತಂಡಗಳು ಸಮಬಲದ ಸಾಧನೆ ಮಾಡಿವೆ.

ಆರ್‌ಸಿಬಿ ಗೆಲುವು : 4 ಪಂದ್ಯಗಳು

ಗುಜರಾತ್ ಟೈಟನ್ಸ್ ಗೆಲುವು : 4 ಪಂದ್ಯಗಳು

ಪ್ರಸಕ್ತ ಸೀಸನ್‌ ನ (IPL 2026) ಸಾಧನೆ:

ಈ ಸೀಸನ್‌ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡವು ಜಿಟಿ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಮೇಲುಗೈ ಸಾಧಿಸಿತ್ತು. ಆದರೆ, ಎರಡನೇ ಪಂದ್ಯದಲ್ಲಿ ತಿರುಗೇಟು ನೀಡಿದ ಗುಜರಾತ್ ಟೈಟನ್ಸ್, ಆರ್‌ಸಿಬಿ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿ ಸೇಡು ತೀರಿಸಿಕೊಂಡಿತ್ತು.

ಕ್ವಾಲಿಫೈಯರ್-1 ರಲ್ಲಿ ಆರ್‌ಸಿಬಿ ರೆಕಾರ್ಡ್ ಹೇಗಿದೆ?

ಮೊದಲ ಕ್ವಾಲಿಫೈಯರ್ ಪಂದ್ಯಗಳಲ್ಲಿ ಆರ್‌ಸಿಬಿ ತಂಡ ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ತಂಡವು ಇದುವರೆಗೆ 3 ಬಾರಿ ಕ್ವಾಲಿಫೈಯರ್-1 ಪಂದ್ಯವನ್ನು ಆಡಿದ್ದು, 2ರಲ್ಲಿ ಗೆಲುವು ಹಾಗೂ 1ರಲ್ಲಿ ಸೋಲು ಕಂಡಿದೆ.

2025: ಕಳೆದ ವರ್ಷದ ಮೊದಲ ಕ್ವಾಲಿಫೈಯರ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಆರ್‌ಸಿಬಿ ಫೈನಲ್ ಟಿಕೆಟ್ ಪಡೆದಿತ್ತು.

2016: ಗುಜರಾತ್ ಲಯನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು.

2011: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸೋಲು ಅನುಭವಿಸಿತ್ತು.

ಕ್ವಾಲಿಫೈಯರ್-1 ರಲ್ಲಿ ಜಿಟಿ ಪ್ರದರ್ಶನ?

ಗುಜರಾತ್ ಟೈಟನ್ಸ್ ತಂಡವು ಮೊದಲ ಕ್ವಾಲಿಫೈಯರ್‌ನಲ್ಲಿ ಮಿಶ್ರ ಪ್ರದರ್ಶನ ನೀಡಿದೆ. ಆಡಿರುವ 2 ಪಂದ್ಯಗಳಲ್ಲಿ 1 ಗೆಲುವು ಮತ್ತು 1 ಸೋಲು ಕಂಡಿದೆ.

2022: ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಫೈನಲ್ ತಲುಪಿತ್ತು.

2023: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೋಲನ್ನು ಅನುಭವಿಸಿತ್ತು.

ಇತಿಹಾಸ ಮತ್ತು ಪ್ರಸ್ತುತ ಫಾರ್ಮ್ ಅನ್ನು ಗಮನಿಸಿದರೆ, ಧರ್ಮಶಾಲಾದ ಸುಂದರ ಮೈದಾನದಲ್ಲಿ ಆರ್‌ಸಿಬಿ ಮತ್ತು ಜಿಟಿ ನಡುವಿನ ಇಂದಿನ ಮೊದಲ ಕ್ವಾಲಿಫೈಯರ್ ಪಂದ್ಯವು ಅತ್ಯಂತ ರೋಮಾಂಚನಕಾರಿಯಾಗಿರುವುದರಲ್ಲಿ ಯಾವುದೇ ಅನುಮಾನವಿಲ್ಲ. (ಏಜೆನ್ಸಿಸ್)

RELATED ARTICLES
- Advertisment -
Google search engine

Most Popular