Thursday, April 9, 2026
Google search engine

Homeರಾಜಕೀಯಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳೇ ಗೆಲುವಿನ ಶಕ್ತಿ : ಪ್ರಿಯಾಂಕ್ ಖರ್ಗೆ

ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳೇ ಗೆಲುವಿನ ಶಕ್ತಿ : ಪ್ರಿಯಾಂಕ್ ಖರ್ಗೆ

ಕಲಬುರಗಿ :  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು.

ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

RELATED ARTICLES
- Advertisment -
Google search engine

Most Popular