ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೂತನ ಅಧ್ಯಕ್ಷರಾಗಿ ಸಾಲಿಗ್ರಾಮ ತಾಲೂಕಿನ ಹೊಸೂರು ಗ್ರಾಮದ ಎಚ್.ಡಿ.ಕೆ.ಭಾಸ್ಕರ್ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಸಂಘದ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಅವರ ಸೂಚನೆಯ ಮೇರೆಗೆ ಮೈಸೂರು ಜಿಲ್ಲಾಧ್ಯಕ್ಷ ಜಿ.ಲೋಕೇಶ್ ಅವರು ಭಾಸ್ಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.