Thursday, July 17, 2025
Google search engine

Homeಅಪರಾಧಹಾಸನ: ಕ್ಯಾನ್ಸರ್ ಪೀಡಿತ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ

ಹಾಸನ: ಕ್ಯಾನ್ಸರ್ ಪೀಡಿತ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ

ಹಾಸನ: ಹಾಸನ ಜಿಲ್ಲೆ ಗೆಂಡೆಕಟ್ಟೆ ಅರಣ್ಯ ಬಳಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ನಟೇಶ್ (38) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಮೂಲದ ನಟೇಶ್, 2008ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಅವರು ಅರಕಲಗೂಡು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಳೆ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ನಟೇಶ್‌ ಬೆಂಗಳೂರಿನಲ್ಲಿ ಮತ್ತು ಬಳಿಕ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬುಧವಾರ ಸಂಜೆ ಆಸ್ಪತ್ರೆಯಿಂದ ಕಾಣೆಯಾಗಿದ್ದ ನಟೇಶ್, ಅರಣ್ಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಒಂದು ತಿಂಗಳ ಹಿಂದಷ್ಟೆ ಅವರನ್ನು ಮುಖ್ಯಪೇದೆಯಾಗಿ ಮುಂಬಡ್ತಿ ನೀಡಿ ಹೊಳೆನರಸೀಪುರ ಠಾಣೆಗೆ ವರ್ಗಾಯಿಸಲಾಗಿತ್ತು. ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.

RELATED ARTICLES
- Advertisment -
Google search engine

Most Popular