ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಹಾಗೂ ಆ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾನವ ಬಂಧುತ್ವ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.
ದೂರಿನಂತೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ವಿಕಸನ ಟಿವಿ ಯೂಟ್ಯೂಬ್ ಚಾನಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಕ್ರಮದಲ್ಲಿ ಕೋಮು ದ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಕಲ್ಲಡ ಪ್ರಭಾಕರ ಭಟ್ ವಿರುದ್ಧ ಹಾಗೂ ಭಾಷಣವನ್ನು ಪ್ರಸಾರ ಮಾಡಿದ “VIKASANA TV” (ವಿಕಸನ ಟಿವಿ) ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಹಾಗೂ ಸದ್ರಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 10/2026, ಕಲಂ:196, 299, 302, 353(2), 3(5) BNS ರಂತೆ ಪ್ರಕರಣ ದಾಖಲಿಸಲಾಗಿದೆ.
ವರದಿ: ಶಂಶೀರ್ ಬುಡೋಳಿ



