ಮಂಡ್ಯ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗೆಲುವಿಗೆ ಜಿಲ್ಲೆಯ ಜೆಡಿಎಸ್ ನಾಯಕರು ಪಣ ತೊಟ್ಟಿದ್ದು, ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬೆಂಬಲಿಗರ ಜೊತೆ ಶಾಸಕ ಎಚ್.ಟಿ. ಮಂಜು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ..
ಬಿಸಿಲಿನ್ನು ಲೆಕ್ಕಿಸಿದೆ ಹಳ್ಳಿ ಹಳ್ಳಿಗಳಲ್ಲಿ ಹಗಲು ರಾತ್ರಿ ಹೆಚ್ ಡಿ ಕುಮಾರಸ್ವಾಮಿ ಪರ ಮತಯಾಚನೆ ಮಾಡುತ್ತಿದ್ದಾರೆ.
ತಮ್ಮ ಕ್ಷೇತ್ರ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ಕುಮಾರಸ್ವಾಮಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ.
ಸರ್ಕಾರದ ಗ್ಯಾರಂಟಿ ಬಿಟ್ಟು ಹೃದಯವಂತ ಮನಸಾಕ್ಷಿಗೆ ಮತ ನೀಡುವಂತೆ ಕೋರಿದ್ದಾರೆ.
ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ 2 ಲಕ್ಷ ಮತಗಳಿಂದ ಗೆಲ್ಲುವ ಬಗ್ಗೆ ಶಾಸಕ ಎಚ್.ಟಿ. ಮಂಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.