ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಎಂಡಿಸಿಸಿ ಬ್ಯಾಂಕ್ ನಿರ್ದೇಶಕರು ಹಾಗೂ ಕೆಪಿಸಿಸಿ ಕಾರ್ಯಕಾರಣಿ ಸದಸ್ಯರಾದ ದೊಡ್ಡಸ್ವಾಮೇಗೌಡರ 75ನೇ ಜನ್ಮ ದಿನೋತ್ಸವ ಪ್ರಯುಕ್ತ ಪಟ್ಟಣದ ಬಯಲು ರಂಗಮಂದಿರದಲ್ಲಿ ಅಯೋಜಿಸಲಾಗಿರುವ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೃಹತ್ ಉದ್ಯೋಗ ಮೇಳಕ್ಕೆ ನೀವು ಬನ್ನಿ ನಿಮ್ಮ ಸ್ನೇಹಿತರನ್ನು ಕರೆ ತನ್ನಿ ಎಂದು ಜಿಲ್ಲಾ ಕುರುಬರ ಸಂಘದ ನಿರ್ಧೆಶಕ ಗಂಧನಹಳ್ಳಿ ಹೇಮಂತ್ ಮನವಿ ಮಾಡಿದರು.
ತಾಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಾರ್ಯಕ್ರಮದ ಪೊಸ್ಟರ್ ಹಾಗು ಕರಪತ್ರ ಹಂಚಿ ಮಾತನಾಡಿದರು.
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಡಿ.ರವಿಶಂಕರ್ ಅವರ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಒಂದೇ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಹೆಚ್ಚು ಅನುಕೂಲವಾಗಲಿ ಎಂಬ ಉದ್ದೇಶದಿಂದ ಇಂತಹ ಜನಪರ ಕಾರ್ಯಕ್ರಮ ಅಯೋಜಿಸಲಾಗಿದೆ ಎಂದರು.
ಆರೋಗ್ಯ ತಪಾಸಣಾ ಶಿಬಿರದದಲ್ಲಿ ಹೃದಯ ಸಂಬಂಧಿ ಖಾಯಿಲೆ, ಮಧುಮೇಹ, ಕಣ್ಣಿನ ತಪಾಸಣೆ, ಮೂಳೆ ಮತ್ತು ಕೀಲು ಸಾಂದ್ರತೆ ಪರೀಕ್ಷೆ, ದಂತ ಚಿಕಿತ್ಸೆ ಹಾಗೂ ಎದೆರೋಗ ಸೇರಿದಂತೆ ಅನೇಕ ರೋಗಗಳ ಬಗ್ಗೆ ತಪಾಸಣೆಯನ್ನು ಜಿಲ್ಲೆಯ ಹೆಸರಾಂತ ಆಸ್ಪತ್ರೆಯಗಳ ನುರಿತ ತಜ್ಞ ವೈದ್ಯರ ತಂಡ ಮತ್ತು ಸಿಬ್ಬಂದಿಗಳು ಆಗಮಿಸಿ ತಪಾಸಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನೂ ಕ್ಷೇತ್ರದಲ್ಲಿ ಮೊಟ್ಟಮೊದಲ ಬಾರಿಗೆ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರಾದ ಡಿ.ರವಿಶಂಕರ್ ಈಗಾಗಲೇ ನೂರಕ್ಕೂ ಹೆಚ್ಚು ಐಟಿಬಿಟಿ ಕಂಪನಿಗಳು, ಕಾರ್ಖಾನೆಯ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದು 18 ರಿಂದ 35 ವರ್ಷ ವಯಸ್ಸಿನ. ಉದ್ಯೋಗಾಂಕ್ಷಿಗಳು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು.
ಈ ಸಂಬಂಧ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು ಬೆಂಬಲಿಗರು ಮತ್ತು ಅಭಿಮಾನಿಗಳು, ಈಗಾಗಲೆ ಈ ಸಂಬಂಧ ಎಲ್ಲಾ ತಯಾರಿ ನಡೆಸಲಾಗಿದ್ದು, ಅದ್ದೂರಿ ಹುಟ್ಟುಹಬ್ಬ ಆಚರಿಸಿ ಹಣವ್ಯಯ ಮಾಡುವ ಬದಲು ಅಂದು ಪಟ್ಟಣದ ಪುರಸಭಾ ಬಯಲು ರಂಗಮಂದಿರ ಮೈದಾನದಲ್ಲಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಇತರರಿಗೆ ಮಾದರಿಯಾಗಲು ಜನಪರ ಕಾರ್ಯಕ್ರಮ ಅಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಮುಖಂಡ ಕೆಂಪರಾಜು, ಯುವ ಮುಖಂಡರಾದ ಜಿ.ಜಿ.ಅಂಗಡಿ ಮಧು, ಚೇತನ್, ಅಭಿ, ಜಿ,ಎಂ, ಅಶ್ವಿನಿ ಕುಮಾರ್, ವ್ಯೆಭವ್ ಸೂರ್ಯ, ಗಗನ್, ದುಷ್ಯಂತ್, ಚಿಗಾಂಗ್,.ಶಿವಪ್ಪ ,ಸಂದೇಶ್ ಇತರರು ಹಾಜರಿದ್ದರು.