ಬೆಂಗಳೂರು: ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಆಗಸ್ಟ್ 18 ಮತ್ತು 19 ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆಗಸ್ಟ್ 17 ರಂದು ಭಾನುವಾರ ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 18ರಂದು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇದಲ್ಲದೇ ದಕ್ಷಿಣ ಕನ್ನಡ, ಹಾಸನ, ಮೈಸೂರು, ಕೊಡಗು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.