ಮಂಗಳೂರು( ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಮಂಗಳೂರು ಬಂಟ್ವಾಳ ತಾಲೂಕಿನಲ್ಲಿ ಇಂದು ರಜೆ ಘೋಷಿಸಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಕ್ಕಳ ಸುರಕ್ಷತೆಗಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025 ರ ಮಂಗಳವಾರ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್ ಇಂದು ಆದೇಶ ಹೊರಡಿಸಿದ್ದಾರೆ. ಆದರೆ, ದಕ್ಷಿಣ ಕನ್ನಡದ ಇತರ ತಾಲೂಕುಗಳಲ್ಲಿ ರಜೆ ಘೋಷಣೆ ಇಲ್ಲ.