ಬೆಂಗಳೂರು : ರಾಜ್ಯಾದ್ಯಂತ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಇಂದು ಬಿರುಸಾಗಿ ಮಳೆಯಾಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಸಾಧಾರಣ ಮಳೆಯಾಗಲಿದೆ. ಈ ಸಂದರ್ಭದಲ್ಲಿ ಕೆಲ ಆಯ್ದ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.