ಬೆಂಗಳೂರು: ರಾಜ್ಯದಲ್ಲಿ ಮಳೆ ಚುರುಕುಗೊಂಡಿದ್ದು, ಮುಂದಿನ 2-3 ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯ ತೀವ್ರತೆ ಹೆಚ್ಚಾಗಿದ್ದು, 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು,ತುಮಕೂರು, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಇದರ ಪರಿಣಾಮ ರಾಜ್ಯದ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಹೀಗಾಗಿ ಸೆ. 6ರವರೆಗೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಸೆಪ್ಟೆಂಬರ್ ತಿಂಗಳಲ್ಲೂ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆಯುವ ಸೂಚನೆ ಸಿಕ್ಕಂತಾಗಿದೆ.
ಭೂ ಕುಸಿತ ಭೀತಿ..!: ಮಲೆನಾಡ ಭಾಗದಲ್ಲಿ ಅತಿಯಾದ ಮಳೆಯ ಕಾರಣ ಪಶ್ಚಿಮ ಘಟ್ಟದ ಚಂದ್ರದ್ರೋಣ ಪರ್ವತ ಸಾಲಿನ ಮುಳ್ಳಯ್ಯನಗಿರಿ,ಸೀತಾಳಯ್ಯನಗಿರಿ, ಬಾಬಾ ಬುಡನ್ ಗಿರಿ, ಕೆಮ್ಮಣ್ಣಗುಂಡಿ ಭಾಗದಲ್ಲಿ ಅತಿಯಾದ ಮಳೆಯ ಜೊತೆಗೆ ಅಲ್ಲಲ್ಲಿ ಭೂ ಕುಸಿತ ಉಂಟಾ
ಮೀನುಗಾರರಿಗೆ ಎಚ್ಚರಿಕೆ..!: ಪ್ರಮುಖವಾಗಿ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಮಳೆಯ ತೀವ್ರತೆಯಿಂದಾಗಿ ಈ ಎಚ್ಚರಿಕೆಯನ್ನು ಜಾರಿಗೊಳಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಾಗಿರಲಿದೆ ಎನ್ನಲಾಗಿದೆ.
ಬೆಂಗಳೂರಲ್ಲಿ ಮಳೆ..! ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.