ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಆಗಸ್ಟ್ 13 ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಮುಂದಿನ ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 15ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 16 ರಂದು ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 13 ರಿಂದ 17ರ ವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಹಲವು ಕಡೆ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 12 ರಿಂದ 18ರವರೆಗೆ ಬೆಂಗಳೂರಿನ ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.