ಮೈಸೂರು : ಈಗಾಗಲೇ ಮುಂಗಾರು ಪೂರ್ವದಲ್ಲಿ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಮೈಸೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರಿಂದ ನಾಳೆಯೂ ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ನಾಳೆಯೂ ರಜೆ ನೀಡಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ನಾಳೆಯೂ ಮೈಸೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗುತ್ತಿದೆ ಎಂದು ಲಕ್ಷ್ಮಿಕಾಂತ್ ರೆಡ್ಡಿ ಅವರು ತಿಳಿಸಿದ್ದಾರೆ.