ಪಾಕಿಸ್ತಾನ: ನೆರೆಯ ದೇಶ ಪಾಕಿಸ್ತಾನದಲ್ಲಿ ಕಳೆದ ಕೆಲ ದಿನಗಳಿಂದ ಅಧಿಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಪಾಕಿಸ್ತಾನದಾದ್ಯಂತ ಮೂರು ದಿನಗಳ ನಿರಂತರ ಭಾರೀ ಮಳೆ ಮತ್ತು ಸಿಡಿಲಿನಿಂದಾಗಿ ೪೯ ಜನರು ಸಾವನ್ನಪ್ಪಿದ್ದಾರೆ. ಧಾರಾಕಾರ ಮಳೆಯಿಂದಾಗಿ ದೇಶದ ನೈಋತ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.

ಗೋಧಿ ಕೊಯ್ಲು ಮಾಡುತ್ತಿದ್ದಾಗ ಸಿಡಿಲು ಬಡಿದು ಕೆಲವು ರೈತರು ಸಾವನ್ನಪ್ಪಿರುವುದು ವರದಿಯಾಗಿದೆ. ಅಧಿಕ ಮಳೆಯಿಂದಾಗಿ ವಾಯುವ್ಯ ಮತ್ತು ಪೂರ್ವ ಪ್ರಾಂತ್ಯದಲ್ಲಿ ಹತ್ತಾರು ಮನೆಗಳು ಕುಸಿದಿವೆ. ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಕ್ತಾರ ಅರ್ಫಾನ್ ಕಥಿಯಾ ಅವರು ಈ ವಾರ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು ಜನ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದ್ದಾರೆ.