Wednesday, June 18, 2025
Google search engine

Homeಅಪರಾಧಕಲ್ಲಡ್ಕ ಪ್ರಭಾಕರ್ ಭಟ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಮುಸ್ಲಿಂ ಮಹಿಳೆಯರ ಶಾಶ್ವತ ಗಂಡ ಎನ್ನುವ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಈ ನೇಮಕ ಪ್ರಶ್ನಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಏಪ್ರಿಲ್ ೦೮) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

RELATED ARTICLES
- Advertisment -
Google search engine

Most Popular