ಬೆಂಗಳೂರು : ಸೌಜನ್ಯಪರ ಹೋರಾಟಗಾರ ಮತ್ತು ಧರ್ಮಸ್ಥಳ ‘ಬುರುಡೆ’ ಪ್ರಕರಣದಲ್ಲಿಯೂ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ವಿಚಾರಕ್ಕೆ ಸಂಬಂಧಪಟ್ಟಂತೆ ಗಡಿಪಾರು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಆದೇಶ ಹೊರಡಿಸಿದೆ.
ಹೈಕೋರ್ಟ್ ನಲ್ಲಿ ಪಾರು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಗಡಿಪಾರು ಸಂಬಂಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಸೂಚನೆ ನೀಡಿ, ಅಕ್ಟೋಬರ್ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿತು. ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸಿದಂತೆ ಹೈಕೋರ್ಟ್ ಸೂಚನೆ ನೀಡಿದೆ.