Saturday, May 24, 2025
Google search engine

Homeರಾಜ್ಯ೫,೮,೯ ಮತ್ತು ೧೧ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದುವರಿಸಲು ಹೈಕೋರ್ಟ್ ಸರ್ಕಾರಕ್ಕೆ ಆದೇಶ

೫,೮,೯ ಮತ್ತು ೧೧ನೇ ತರಗತಿಗಳ ಬೋರ್ಡ್ ಪರೀಕ್ಷೆ ಮುಂದುವರಿಸಲು ಹೈಕೋರ್ಟ್ ಸರ್ಕಾರಕ್ಕೆ ಆದೇಶ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ೫, ೮, ೯ ಮತ್ತು ೧೧ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.

ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು ರದ್ದುಪಡಿಸಿದ ವಿಭಾಗೀಯ ಪೀಠ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು. ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಿದೆ.

ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರುಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಲ್ಲಿಸಿದ ಮನವಿಯನ್ನೂ ಇದೇ ವೇಳೆ ತಿರಸ್ಕರಿಸಿದ ವಿಭಾಗೀಯ ಪೀಠ, ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಅಲ್ಲೇ ಕೋರುವಂತೆ ಎಂದು ಸೂಚಿಸಿದೆ.

RELATED ARTICLES
- Advertisment -
Google search engine

Most Popular