Thursday, June 11, 2026
Google search engine

HomeಅಪರಾಧಕಾನೂನುSC, ST ವಿದ್ಯಾರ್ಥಿಗಳ RTE ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ : 9,10ನೇ ತರಗತಿ ಉಚಿತ...

SC, ST ವಿದ್ಯಾರ್ಥಿಗಳ RTE ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ : 9,10ನೇ ತರಗತಿ ಉಚಿತ ಶಿಕ್ಷಣಕ್ಕೆ ಬ್ರೇಕ್

ಬೆಂಗಳೂರು : SC,ST ವಿದ್ಯಾರ್ಥಿಗಳಿಗೆ RTE ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು 10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಕೋರ್ಟ್​ ಮಧ್ಯಂತರ ತಡೆ ನೀಡಿದೆ. 2026ರ ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(KAMS) ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ, ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಆರ್‌ಟಿಇ ಅಡಿ 6ರಿಂದ 14 ವರ್ಷದೊಳಗಿನವರಿಗೆ ಉಚಿತ ಶಿಕ್ಷಣಕ್ಕೆ ಅವಕಾಶವಿದೆ. SC, ST ವರ್ಗಕ್ಕೆ ಮಾತ್ರ 9, 10ನೇ ತರಗತಿಗೆ ವಿಸ್ತರಣೆಗೆ ಅವಕಾಶವಿಲ್ಲ. ಆರ್‌ಟಿಇ ಕಾನೂನಿನ ಉಲ್ಲಂಘನೆ, ಸಮಾನತೆಯ ಹಕ್ಕಿನ ಉಲ್ಲಂಘನೆ. ಹೀಗಾಗಿ ಸರ್ಕಾರದ ಸುತ್ತೋಲೆಗೆ ತಡೆ ನೀಡಲು ಆದೇಶಿಸಬೇಕೆಂದು ಮನವಿ ಮಾಡಿತ್ತು.ಇದನ್ನ ವಿಚಾರಣೆ ನಡೆಸಿದ ಕೋರ್ಟ್, ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಮನವಿಯನ್ನು ಪುರಸ್ಕರಿಸಿದ್ದು, ಸುತ್ತೋಲೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಇದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಆರ್‌ಟಿಐ ಅಡಿ ಖಾಸಗಿ ಶಾಲೆಗೆ ಸೇರಿರುವ ಮಕ್ಕಳಿಗೆ 8ನೇ ಕ್ಲಾಸ್‌ ವರೆಗೆ ಉಚಿತ ಶಿಕ್ಷಣಕ್ಕೆ ಅವಕಾಶ ಇತ್ತು. ಆರ್‌ಟಿಇ ಕಾಯ್ದೆ ಜಾರಿಯಾದ ವರ್ಷದಿಂದ ಈವರೆಗೆ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಸೀಟುಗಳಿಗೆ ಪ್ರವೇಶ ಪಡೆದಿರುವ ಮಕ್ಕಳಿಗೆ 8ನೇ ತರಗತಿ ವರೆಗಿನ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಸಂಬಂಧಿಸಿದ ಶಾಲೆಗಳಿಗೆ ಮರು ಪಾವತಿಸುತ್ತಾ ಬಂದಿದೆ. ಆದ್ರೆ, ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ 8ನೇ ತರಗತಿ ಮುಗಿದ ನಂತರವೂ ಅದೇ ಖಾಸಗಿ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಯವರೆಗೆ ಉಚಿತ ಶಿಕ್ಷಣ ವಿಸ್ತರಿಸಿ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು.

RELATED ARTICLES
- Advertisment -
Google search engine

Most Popular