Monday, May 4, 2026
Google search engine

Homeದೇಶಈ ಬಾರಿಯ ಪಂಚ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಹೈಲೈಟ್ಸ್

ಈ ಬಾರಿಯ ಪಂಚ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಹೈಲೈಟ್ಸ್

ಮಾರ್ಚ್‌ 2026ರಲ್ಲಿ ನಡೆದ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಪೂರ್ಣಗೊಂಡಿದ್ದು, ದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಫಲಿತಾಂಶಗಳು ಹೊರಬಿದ್ದಿವೆ. ಹೌದು ಬಂಗಾಳದಲ್ಲಿ ಸತತ 15 ವರ್ಷ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಅಲ್ಲಿನ ಜನತೆ ಬ್ರೇಕ್ ಹಾಕಿದ್ದು, 294 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಬರೋಬ್ಬರಿ 170ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ, ಬಹುಮತದ ಗಡಿ (148) ದಾಟುವ ಮೂಲಕ ಬಂಗಾಳದಲ್ಲಿ ತನ್ನ ಚೊಚ್ಚಲ ಸರ್ಕಾರ ರಚಿಸಲು ಸಜ್ಜಾಗಿದೆ.

ಇನ್ನೂ ತಮಿಳುನಾಡು ರಾಜಕೀಯದಲ್ಲೂ ಹೊಸ ಕ್ರಾಂತಿ ಸೃಷ್ಟಿಯಾಗಿದ್ದು, ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಚೊಚ್ಚಲ ಚುನಾವಣೆಯಲ್ಲೇ 107ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಡಳಿತಾರೂಢ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿಕೂಟಗಳು ತೀವ್ರ ಹಿನ್ನಡೆ ಅನುಭವಿಸಿವೆ.

ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದ 294 ಕ್ಷೇತ್ರಗಳ ಪೈಕಿ ಬಿಜೆಪಿ ಸ್ಪಷ್ಟ ಬಹುಮತದ ಗಡಿಯನ್ನು ದಾಟಿ, ಸುಮಾರು 199 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಬಂಗಾಳದಲ್ಲಿ ಬಿಜೆಪಿ ಸಾಧಿಸಿದ ಅತ್ಯಂತ ದೊಡ್ಡ ಐತಿಹಾಸಿಕ ಗೆಲುವಾಗಿದೆ. ಪ.ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಕೇವಲ 90 ರ ಆಸುಪಾಸಿನಲ್ಲಿ ಸೀಟುಗಳನ್ನು ಗಳಿಸಿ ತೀವ್ರ ಹಿನ್ನಡೆ ಅನುಭವಿಸಿದೆ. ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರು ಸದ್ಯ ಮುನ್ನಡೆಯಲ್ಲಿದ್ದರೂ, ರಾಜ್ಯಾದ್ಯಂತ ಅವರ ಪಕ್ಷಕ್ಕೆ ಭಾರಿ ಹಿನ್ನೆಡಯಾಗಿದೆ.

ತಮಿಳುನಾಡು

ತಮಿಳುನಾಡಿನಲ್ಲಿ ನಟ ವಿಜಯ್ ಅವರ ಹೊಸ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ (TVK) ಮೊದಲ ಚುನಾವಣೆಯಲ್ಲೇ 100 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಳೆದ ಹಲವು ದಶಕಗಳಿಂದ ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಪ್ರಾಬಲ್ಯಕ್ಕೆ ವಿಜಯ್ ಬ್ರೇಕ್ ಹಾಕಿದ್ದಾರೆ.

ಕೇರಳ

ಕೇರಳದಲ್ಲಿ ಆಡಳಿತಾರೂಢ ಎಲ್‌ಡಿಎಫ್ ಮೈತ್ರಿಕೂಟವನ್ನು ಹಿಂದಿಕ್ಕಿ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸುಮಾರು 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಧಿಕಾರಕ್ಕೆ ಮರಳುವ ಮುನ್ಸೂಚನೆ ನೀಡಿದೆ.

ಅಸ್ಸಾಂ

ಅಸ್ಸಾಂನಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸಿದೆ. ಬಿಜೆಪಿ ಮೈತ್ರಿಕೂಟ 88 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.

ಪುದುಚೇರಿ: 

ಪುದುಚೇರಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವು ಬಹುಮತದ ಗಡಿಯನ್ನು ದಾಟಿದ್ದು, ಮತ್ತೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ಬಾರಿಯ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಇತಿಹಾಸ ಬರೆದರೆ, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಪಕ್ಷದ ಅಬ್ಬರ ಮತ್ತು ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟದ ಕಮ್‌ಬ್ಯಾಕ್ ಪ್ರಮುಖ ಆಕರ್ಷಣೆಯಾಗಿದೆ.

RELATED ARTICLES
- Advertisment -
Google search engine

Most Popular