Friday, December 5, 2025
Google search engine

Homeರಾಜ್ಯಸುದ್ದಿಜಾಲಮತ್ತೆ ಹಿಜಾಬ್-ಕೇಸರಿ: ಸರ್ಕಾರಿ ಕಾಲೇಜಿನಲ್ಲಿ ಭುಗಿಲೆದ್ದ ವಿವಾದ!

ಮತ್ತೆ ಹಿಜಾಬ್-ಕೇಸರಿ: ಸರ್ಕಾರಿ ಕಾಲೇಜಿನಲ್ಲಿ ಭುಗಿಲೆದ್ದ ವಿವಾದ!

ಹಾವೇರಿ: ಜಿಲ್ಲೆಯ ಅಕ್ಕಿ ಆಲೂರು ಗ್ರಾಮದಲ್ಲಿರುವ ಸಿಜಿ ಬೆಲ್ಲದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಮತ್ತು ಕೇಸರಿ ಶಾಲುಗಳನ್ನು ಧರಿಸಿ ವಿದ್ಯಾರ್ಥಿಗಳ ಗುಂಪು ತರಗತಿಗಳಿಗೆ ಬಂದಿದ್ದು, ಇದೀಗ ಹೊಸ ವಿವಾದ ಭುಗಿಲೆದ್ದಿದೆ.

ಈ ಕುರಿತು ಕಾಲೇಜು ಆಡಳಿತ ಮಂಡಳಿಯು ಡ್ರೆಸ್ ಕೋಡ್ ವಿಚಾರದ ಬಗ್ಗೆ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ, ಗುರುವಾರ ಹಿಂದೂ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಪ್ರವೇಶಿಸಿದ್ದಯ, ಈ ವಿಷಯವನ್ನು ಪದೇ ಪದೆ ತಿಳಿಸಿದರೂ, ಕಾಲೇಜು ಸಮವಸ್ತ್ರ ನಿಯಮಗಳನ್ನು ಸಮಾನವಾಗಿ ಜಾರಿಗೊಳಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪ್ರಾಂಶುಪಾಲ ವಿರೇಶ್ ಕಮ್ಮೂರ್, ಸಂಸ್ಥೆಯು ಎಲ್ಲ ವಿದ್ಯಾರ್ಥಿಗಳು ತರಗತಿಯ ಒಳಗೆ ನಿಗದಿತ ಸಮವಸ್ತ್ರವನ್ನು ಧರಿಸಬೇಕೆಂದು ಕಡ್ಡಾಯಗೊಳಿಸುತ್ತದೆ. ಆದರೂ, ಕೆಲವು ವೈಯಕ್ತಿಕ ಸಂದರ್ಭಗಳಲ್ಲಿ ಕೆಲವು ರಿಯಾಯಿತಿಗಳನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ತರಗತಿಗೆ ಪ್ರವೇಶಿಸುವ ಮೊದಲು ಅವರು ಬೇರೆ ಬೇರೆ ಬಟ್ಟೆಗಳನ್ನು ಧರಿಸುತ್ತಾರೆ. ಆದರೆ, ಎಲ್ಲ ವಿದ್ಯಾರ್ಥಿಗಳು ತರಗತಿಯೊಳಗೆ ಕಾಲೇಜು ಸಮವಸ್ತ್ರವನ್ನೇ ಧರಿಸಬೇಕು ಎಂಬ ನಿಯಮವಿದೆ. ಒಬ್ಬ ವಿದ್ಯಾರ್ಥಿಗೆ ಸಮಸ್ಯೆ ಇದ್ದರೆ, ಅವರಿಗೆ ರಿಯಾಯಿತಿ ನೀಡಲಾಗುತ್ತದೆ. ಹಿಜಾಬ್ ಧರಿಸಿ ತರಗತಿಗೆ ಬರುವ ಬಗ್ಗೆ ವಿದ್ಯಾರ್ಥಿಗಳು ನನ್ನ ಗಮನಕ್ಕೆ ತಂದಿದ್ದರು. ಆದರೆ ಇಂದು, ಒಬ್ಬ ವಿದ್ಯಾರ್ಥಿನಿ ಹಿಜಾಬ್ ಧರಿಸಿ ತರಗತಿಗೆ ಬಂದ ನಂತರ, ಹುಡುಗರು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಪೋಷಕರ ಸಭೆ ಕರೆಯಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ರಾಜ್ಯದ ಹಿಂದಿನ ಬಿಜೆಪಿ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹೇರಿತ್ತು. ಈ ವಿಷಯವು ಕರ್ನಾಟಕ ಹೈಕೋರ್ಟ್‌ ಅಂಗಳಕ್ಕೆ ತಲುಪಿದ್ದು, ಅದು ಆಗಿನ ಬಿಜೆಪಿ ಸರ್ಕಾರ ವಿಧಿಸಿದ್ದ ನಿಷೇಧವನ್ನು ಎತ್ತಿಹಿಡಿಯಿತು. ಈ ವಿಷಯದಲ್ಲಿ, ಸುಪ್ರೀಂ ಕೋರ್ಟ್ ವಿಭಿನ್ನ ತೀರ್ಪು ನೀಡಿ, ಇದು ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿಯಲು ಕಾರಣವಾಯಿತು ಎಂದಿದ್ದಾರೆ.

RELATED ARTICLES
- Advertisment -
Google search engine

Most Popular