ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದ ನಂತರ, ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆ ನಡೆದ ಆರ್‌ಸಿಬಿ ತಂಡದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಉಂಟಾದ ನೂಕುನುಗ್ಗಳಿನಿಂದ 11 ಜನರ ಮೃತ್ಯು ಮತ್ತು 30ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಈ ಘಟನೆ ನಗರದಲ್ಲಿ ಭಾರೀ ಆತಂಕ ಹುಟ್ಟಿಸಿತು.
ಈ ಗಂಭೀರ ಘಟನೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳುವ ಉದ್ದೇಶದಿಂದ, ಡಾ. ಪರಮೇಶ್ವರ್ ಅವರು ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿ, ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗಳೊಂದಿಗೆ ಸಂಗತಿಗಳನ್ನು ಪರಿಶೀಲಿಸಿದ್ದಾರೆ.
ಗೃಹ ಸಚಿವರು ಜರುಗಿದ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸುತ್ತಿರುವುದಾಗಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಟ್ಟದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಷ್ಟಾನ ಮಾಡಲಾಗುವುದು ಎಂದು ಹೇಳಿದ್ದಾರೆ.