Saturday, August 30, 2025
Google search engine

Homeಅಪರಾಧಕಲಬುರಗಿಯಲ್ಲಿ ಮರ್ಯಾದೆ ಹತ್ಯೆ: ಮಗಳನ್ನು ಬರ್ಬರವಾಗಿ ಕೊಂದು ಸುಟ್ಟ ಅಪ್ಪ!

ಕಲಬುರಗಿಯಲ್ಲಿ ಮರ್ಯಾದೆ ಹತ್ಯೆ: ಮಗಳನ್ನು ಬರ್ಬರವಾಗಿ ಕೊಂದು ಸುಟ್ಟ ಅಪ್ಪ!

ಕಲಬುರಗಿ : ಬಿಸಿಲನಗರಿ ಕಲಬುರಗಿಯಲ್ಲಿ ಬೆಚ್ಚಿಬೀಳಿಸೋ ಘಟನೆ ನಡೆದಿದೆ. ಮರ್ಯಾದೆ ಪ್ರಶ್ನೆಗೆ ಹೆತ್ತಪ್ಪನೇ ಪುತ್ರಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.

ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಸೇರಿ ಹತ್ಯೆ ಮಾಡಿ, ಸುಟ್ಟು ಹಾಕಿದ್ದಾರೆ. ಕಲಬುರಗಿ ಮೇಳಕುಂದಾ (ಬಿ) ಗ್ರಾಮದಲ್ಲಿ ಘಟನೆ ನಡೆದಿದೆ.

ಅಪ್ಪನಿಂದಲೇ ಕೊಲೆಯಾದ ಯುವತಿಯನ್ನು ಕವಿತಾ ಕೊಳ್ಳೂರ (18) ಎಂದು ಗುರುತಿಸಲಾಗಿದೆ. ಆಕೆಯ ತಂದೆ ಶಂಕರ ಕೊಳ್ಳೂರ ಹಾಗೂ ಸಂಬಂಧಿಗಳಾದ ಶರಣು, ದತ್ತು ಚೋಳಾಭರ್ಧಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ಇನ್ನು ಫರಹತಾಬಾದ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕವಿತಾ, ಅದೇ ಗ್ರಾಮದ ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಇದ್ರಿಂದ ಕೋಪಗೊಂಡ ಕುಟುಂಬಸ್ಥರು ಮರ್ಯಾದೆ ಹತ್ಯೆ ನಡೆಸಿದ್ದಾರೆ ಎಂಬ ವಿಚಾರ ಪೊಲೀಸರಿಗೆ ವ್ಯಕ್ತವಾಗಿದೆ.

ಪಿಯುಸಿ ಓದಲು ಕಲಬುರಗಿಗೆ ಬಂದಿದ್ದ ವೇಳೆ ಇವರಿಬ್ಬರ ನಡುವೆ ಪರಿಚಯವಾಗಿತ್ತು. ಪ್ರೀತಿ ವಿಚಾರ ಮನೆಯವರಿಗೆ ಗೊತ್ತಾಗಿದೆ. ಹೀಗಾಗಿಯೇ ಕಾಲೇಜು ಬಿಡಿಸಿ ಆಕೆಯನ್ನು ಮನೆಯಲ್ಲೇ ಇರು ವಂತೆ ಹೇಳಿದ್ದರು.ಆದರೆ ಕವಿತಾ ಮದುವೆ ಮಾಡಲು ಪಟ್ಟು ಹಿಡಿದಿದ್ದಳೆಂದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ.

ಮಧ್ಯರಾತ್ರಿ ಮನೆಯವರು ಸೇರಿ ಕವಿತಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ನಂತರ ಕೀಟನಾಶಕ ಸುರಿದು ಆತ್ಮಹತ್ಯೆ ರೀತಿ ಬಿಂಬಿಸಲು ಯತ್ನಿಸಿದ್ದರು. ಬೆಳಗ್ಗೆ ಗ್ರಾಮದ ಹೊರವಲಯದ ಜಮೀನಿಗೆ ದೇಹವನ್ನು ಕೊಂಡೊಯ್ದು ಸುಟ್ಟಿದ್ದರು ಎಂದು ತನಿಖೆಯಿಂದ ಗೊತ್ತಾಗಿದೆ.

ಸದ್ಯ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮೂಳೆ ಅವಶೇಷಗಳನ್ನು ಸಂಗ್ರಹಿಸಿ ಕಳುಹಿಸಿದ್ದಾರೆ.ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕವಿತಾ ಕುಟುಂಬದ ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ.

RELATED ARTICLES
- Advertisment -
Google search engine

Most Popular