Saturday, May 2, 2026
Google search engine

Homeಸಿನಿಮಾಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ: ಸಿಹಿ ಸುದ್ದಿ ಹಂಚಿಕೊಂಡ ಡಾಲಿ

ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ: ಸಿಹಿ ಸುದ್ದಿ ಹಂಚಿಕೊಂಡ ಡಾಲಿ

ಸ್ಯಾಂಡಲ್‌ವುಡ್‌ನ ನಟ ರಾಕ್ಷಸ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಡಾಲಿ ಧನಂಜಯ್​​ ಹಾಗೂ ಧನ್ಯತಾ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್‌ ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್​ ಮಾಡಿ, Our universe is expanding ಎಂದು ಬರೆದುಕೊಂಡಿದ್ದರು.

2025ರ ಫೆ.16ರಂದು ಡಾಲಿ ಧನಂಜಯ್‌ ಅವರು ಡಾ.ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು. ಸದ್ಯ ಈ ಸಿಹಿ ಸುದ್ದಿಗೂ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶುಭ ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular