Wednesday, May 21, 2025
Google search engine

Homeಅಪರಾಧಹುಬ್ಬಳ್ಳಿ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ- ಆರೋಪಿಗಳು ವಶಕ್ಕೆ

ಹುಬ್ಬಳ್ಳಿ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ- ಆರೋಪಿಗಳು ವಶಕ್ಕೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ ಅಶೋಕನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಲಾ ವಿದ್ಯಾರ್ಥಿ ಓರ್ವ ಯುವತಿಯೊಂದಿಗೆ ಮಾತನಾಡುತ್ತಿದ್ದನು. ಇದನ್ನು ಕಂಡ ಕೆಲ ಹುಡುಗರು ಯುವತಿಯೊಂದಿಗೆ ಏಕೆ ಮಾತನಾಡಿದ್ದಿ ಎಂದು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಮಾತಿನ ಚಕಮಕಿ ಆಗಿದೆ. ಇದು ವಿಕೋಪಕ್ಕೆ ತಿರುಗಿದ್ದು, ವಿದ್ಯಾರ್ಥಿಗೆ ಮನಬಂದಂತೆ ಥಳಿಸಿ, ಕಾಲಿನಿಂದ ಒದ್ದಿದ್ದಾರೆ.

ಈ ವಿಚಾರ ವಿದ್ಯಾರ್ಥಿಯ ಶಾಲೆಯ ಪ್ರಾಂಶುಪಾಲರಿಗೆ ತಿಳಿದಿದೆ. ಪ್ರಾಂಶುಪಾಲರು ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಾಂಶುಪಾಲರು ನೀಡಿದ ದೂರಿನ ಅನ್ವಯ ಪೋಲೀಸರ ತನಿಖೆ ನಡೆಸಿ, ಹಲ್ಲೆ ಮಾಡಿದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಲ್ಲೆ ಮಾಡಿದವರು ವಿವಿಧ ಶಾಲೆ ಮತ್ತು ಕಾಲೇಜಿಗೆ ಸೇರಿದವರೆಂಬ ಮಾಹಿತಿ ದೊರೆತಿದ್ದು, ಒಟ್ಟು ಐವರು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ.

ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಫ್ರಾನ್ಸಿಸ್ ಉಡುಮಿಲ ಸೇರಿದಂತೆ ಐವರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular