Saturday, January 10, 2026
Google search engine

Homeಅಪರಾಧನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ: ಆರೋಪಿ ಬಂಧನ

ನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ: ಆರೋಪಿ ಬಂಧನ

ಬೆಂಗಳೂರು: ಕರ್ನಾಟಕ-ಆಂಧ್ರ ಗಡಿಯ ನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ.

ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಚೆಕ್ ಪೋಸ್ಟ್ ಬಳಿ ಸ್ಫೋಟಕ ಸಾಗಿಸುತ್ತಿದ್ದ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಖಾಸಗಿ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತು.

ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಆತನನ್ನು ಆಸಿಫ್ ಹಜರತ್ ಅಲಿ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ದುಷ್ಕರ್ಮಿ ತಪ್ಪಿಸಿಕೊಂಡಿದ್ದಾನೆ.

ಆರೋಪಿಯಿಂದ 1200 ಜಿಲೆಟಿನ್ ಕಡ್ಡಿಗಳು, 7 ಬಾಕ್ಸ್ ವೈರ್, 6 ಡಿಟೋನೇಟರ್ ವಶಪಡಿಸಿಕೊಳ್ಳಲಾಗಿದೆ.

ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಕ್ರಮ ಕಲ್ಲುಗಣಿಗಾರಿಕೆಗೆ ಸಾಗಿಸಲಾಗುತ್ತಿತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular