ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇಂದು ಬೃಹತ್ ಸಾಧನಾ ಸಮಾವೇಶ ನಡೆಯುತ್ತಿದ್ದು, 1,146.76 ಕೋಟಿ ರೂಪಾಯಿ ಮೊತ್ತದ 87 ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಡೆಯಲಿದೆ.
ತಿಮ್ಮದಾಸ್ ಹೋಟೆಲ್ ಬಳಿಯ ವೇದಿಕೆ ಶಿವಪುರ ಧ್ವಜಸತ್ಯಾಗ್ರಹ ಸೌಧ ಶೈಲಿಯಲ್ಲಿ ಆಕರ್ಷಕವಾಗಿ ನಿರ್ಮಿಸಲಾಗಿದೆ.
ಕಾರ್ಯಕ್ರಮದಲ್ಲಿ 16 ಇಲಾಖೆಗಳಿಗೆ ಸೇರಿರುವ 60 ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ 27 ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ. ಕೃಷಿ, ತೋಟಗಾರಿಕೆ, ಶಿಕ್ಷಣ ಸೇರಿದಂತೆ ಹಲವಾರು ಇಲಾಖೆಗಳಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ಸಹ ತೆರೆಯಲಾಗಿದೆ
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವರು ಭಾಗವಹಿಸಲಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಲು ಕೈ ನಾಯಕರು ತಯಾರಿ ಮಾಡಿದ್ದಾರೆ.