ವರದಿ ಎಡತೊರೆ ಮಹೇಶ್
ಎಚ್.ಡಿ. ಕೋಟೆ : ಕಾಡಿನ ಸುರಕ್ಷೆತೆಯತ್ತ ಹೆಚ್ಚು ಒತ್ತು ಕೊಟ್ಟಿರುವ ಹಿನ್ನಲೆ ಇತ್ತೀಚ್ಚಿನ ದಿನಗಳಲ್ಲಿ ಕಾಡುಪ್ರಾಣಿಗಳು ಹೆಚ್ಚಿನ ಪ್ರಮಾಣದಲ್ಲಿ ರುವ ಕಾರಣ ಮಾನವ ಮತ್ತು ಪ್ರಾಣಿ ಸಂಘರ್ಷ ಹೆಚ್ಚಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ತಿಳಿಸಿದರು.
ತಾಲ್ಲೂಕಿನ ಮಾನಿಮೂಲೆಹಾಡಿಯಲ್ಲಿ ಆಯೋಜಿಸಲಾಗಿದ್ದ 125 ನೇ ಮನ್‌ಕಿಬಾತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದ ಅರಣ್ಯದ ಗಡಿ ಭಾಗಗಳಲ್ಲಿ ಸಾವಿರಾರು ಕಿಲೋಮೀಟರ್ ರೈಲ್ವೇ ಬ್ಯಾರಿಕೇಡ್ ಅಳವಡಿಸಲು ಯೋಜನೆ ರೂಪಿಸಲಾಗುತ್ತಿದೆ, ಯೋಜನೆ ರೂಪುಗೊಂಡ ಬಳಿಕ ಅನುಷ್ಠಾನದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುವುದು ಎಂದು ತಿಳಿಸಿದರು.
ಪ್ರಧಾನ ಮಂತ್ರಿಯವರ ಕಾರ್ಯಕ್ರಮಗಳು ಮತ್ತು ಅವರ ಅಭಿವೃದ್ಧಿ ಕೆಲಸಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಸಹ ತಲುಪುತ್ತಿವೆ, ಅದಕ್ಕೆ ನಿರ್ದೇಶನವೆಂಬಂತೆ ಇಂದು ನಡೆದ ಕಾರ್ಯಕ್ರಮವೇ ಸಾಕ್ಷಿ ಎಂದರು.

ನಾಗರಹೊಳೆ ಅರಣ್ಯದಲ್ಲಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಚಾರ, ದೇಶದ ಕಟ್ಟ ಕಡೆಯ ವ್ಯಕ್ತಿಗೂ ಮೋದಿ ರವರ ಅಭಿವೃದ್ಧಿ ಸಂದೇಶ ರವಾನಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು ಅದರಂತೆ ಸಾಕಾರಗೊಂಡಿದೆ ಎಂದರು
ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಕಂಬ್ರಳ್ಳಿ ಸುಬ್ಬಣ್ಣ ಮಾತನಾಡಿ ಎಚ್.ಡಿ. ಕೋಟೆ ತಾಲ್ಲೂಕಿನ ಮಾನಿಮೂಲೆ ಹಾಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ನಮಗೆ ಹಲವು ಸಮಸ್ಯೆಗಳು ಎದುರಾದವು, ಆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಕಾರ್ಯಕ್ರಮವನ್ನು ಹಾಡಿಯಲ್ಲಿ ಆಯೋಜನೆ ಮಾಡಿದ್ದೇವೆ, ಜೊತೆಗೆ ಇಲ್ಲಿನ ಸಮಸ್ಯೆಗಳನ್ನು ಗುರುತಿಸಿ ಸಂಸದರಿಗೆ ಮಾಹಿತಿ ನೀಡಲಾಗಿದ್ದು, ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗುವುದು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಹ್ಮಣ್ಯಸ್ವಾಮಿ, ಮಾಜಿ ಶಾಸಕ, ಬಾಲರಾಜು, ಎನ್.ವಿ. ಫಣೀಶ್, ತಾಲ್ಲೂಕು ಅಧ್ಯಕ್ಷ ಶಂಭೇಗೌಡ, ಕಾರ್ಯದರ್ಶಿ ನಂಜನಾಯಕನಹಳ್ಳಿ ಗುರುಸ್ವಾಮಿ
ವಿಜಯಕುಮಾರ್, ಇದ್ದರು.