Friday, December 5, 2025
Google search engine

Homeರಾಜಕೀಯನಾನು ಪಾರದರ್ಶಕ ವ್ಯಕ್ತಿ : ಡಿಕೆಶಿ

ನಾನು ಪಾರದರ್ಶಕ ವ್ಯಕ್ತಿ : ಡಿಕೆಶಿ

ಬೆಂಗಳೂರು: ಕಾರ್ಟಿಯರ್‌ ವಾಚ್ ರಾಮಾಯಣ ಇದೀಗ ಭಾರಿ ಸುದ್ದಿಯಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಟಿಯರ್‌ ಕಂಪನಿ ವಾಚ್‌ ಧರಿಸಿದ್ದು, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲೂ ಮಾಹಿತಿ ನೀಡಿಲ್ಲ ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದರು.

ಸದ್ಯ ಆರೋಪಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿ, ಮಿಸ್ಟರ್ ನಾರಾಯಣಸ್ವಾಮಿ. ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್, ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು ಇದು ನಿಮಗೆ ಘನತೆ ತರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ. ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ ಎಂದು ಲೇವಡಿ ಮಾಡಿದ್ದಾರೆ. ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ ಎಂದು ಎಕ್ಸ್ ಖಾತೆಯಲ್ಲಿ ದಾಖಲೆಗಳನ್ನು ಲಗತ್ತಿಸಿ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular