ರಾಮನಗರ : ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು ಈ ಹಿನ್ನೆಲೆಯಲ್ಲಿ ಪದಗ್ರಹಣಕ್ಕೆ ಹೋಗಲು ತಯಾರಿ ಮಾಡುತ್ತಿರುವುದಾಗಿ ಶಾಸಕ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸಿ.ಪಿ ಯೋಗೇಶ್ವರ್, ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ನಾವು ಹೋಗುತ್ತಿದ್ದೇವೆ. 200 ಬಸ್ ಗಳಲ್ಲಿ ಹೋಗಲು ತಯಾರಿ ನಡೆಸಿದ್ದೇವೆ ತಾಲ್ಲೂಕಿನಿಂದ ಅತಿ ಹೆಚ್ಚು ಕಾರ್ಯಕರ್ತರು ಹೋಗುತ್ತೇವೆ ಎಂದರು.
ಸಚಿವ ಸ್ಥಾನಕ್ಕೆ ಲಾಬಿ ಕುರಿತು ಪ್ರತಿಕ್ರಿಯಿಸಿದ ಸಿ.ಪಿ ಯೋಗೇಶ್ವರ್, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಯಾವುದೇ ಸಚಿವ ಸ್ಥಾನ ಬೇಡ ಎಂದು ತಿಳಿಸಿದರು.



