Thursday, July 10, 2025
Google search engine

Homeರಾಜಕೀಯನಾನೇ 5 ವರ್ಷ ಸಿಎಂ ಆಗಿರುತ್ತೇನೆ, ಪವರ್ ಶೇರಿಂಗ್ ಚರ್ಚೆಯೇ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ನಾನೇ 5 ವರ್ಷ ಸಿಎಂ ಆಗಿರುತ್ತೇನೆ, ಪವರ್ ಶೇರಿಂಗ್ ಚರ್ಚೆಯೇ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ದೆಹಲಿ: 5 ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ. ಪವರ್ ಷೇರಿಂಗ್ ವಿಷಯ ಪ್ರಸ್ತಾಪವೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಹಾಗಾಗಿ ಸಿಎಂ ಬದಲಾವಣೆ ವಿಚಾರ ಎಲ್ಲಿಂದ ಬರುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ ಬದ್ಧವಾಗಿರುತ್ತೇವೆ ಎಂದರು.

ಕೆಲವು ಶಾಸಕರು ನನ್ನ ಪರವಾಗಿ ಇನ್ನು ಕೆಲವು ಶಾಸಕರು ಡಿಕೆ ಶಿವಕುಮಾರ್ ಪರವಾಗಿ ಹೇಳಿಕೆ ನೀಡುತ್ತಿರುತ್ತಾರೆ. ಆದರೆ ಅದು ಅವರ ವೈಯಕ್ತಿಕ ಅಭಿಪ್ರಾಯ ಅಷ್ಟೆ. ಸಿಎಂ ಬದಲಾವಣೆ ಅಥವಾ ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾನಾಗಲಿ, ಡಿಕೆ ಶಿವಕುಮಾರ್ ಆಗಲಿ ಬದ್ಧವಾಗಿರಬೇಕು. ಬದ್ಧವಾಗಿ ಇರುತ್ತೇವೆ ಎಂದರು.

ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯವರು ಹೇಳಿಕೆ ಕೊಡ್ತಾರೆ ಅಂದರೆ ಅವರು ನಮ್ಮ ಹೈಕಮಾಂಡಾ? ಯಾರೋ ಹೇಳಿದ್ದನ್ನು ಕೇಳಿ ನೀವು ಯಾಕೆ ಗಾಳಿ ಸುದ್ದಿ ಹಬ್ಬಿಸುತ್ತಿರಾ? ನಾನು, ಡಿಕೆ ಶಿವಕುಮಾರ್ ಈ ಬಗ್ಗೆ ಹೇಳಿಕೆ ನೀಡಿಲ್ಲ. ಅಲ್ಲದೇ ನಾನೇ ಕೆಲವು ದಿನಗಳ ಹಿಂದೆ ನಾನೇ 5 ವರ್ಷ ಸಿಎಂ ಅಂತನೂ ಹೇಳಿದ್ದೇನೆ. ಇಷ್ಟಾದರೂ ಅದೇ ವಿಷಯದ ಗಾಳಿ ಸುದ್ದಿ ಹಬ್ಬಿಸುತ್ತಿದ್ದಿರಲ್ಲಾ ಎಂದು ಮಾಧ್ಯಮಗಳ ಮೇಲೆ ಗರಂ ಆದರು.

ಇತ್ತೀಚೆಗೆ ಸುರ್ಜೆವಾಲಾ ರಾಜ್ಯಕ್ಕೆ ಭೇಟಿ ನೀಡಿ ಶಾಸಕರ ಜೊತೆ ಮಾತುಕತೆ ನಡೆಸಿದ್ದು ಯಾಕೆ ಎಂಬುದನ್ನು ನೀವು ಅವರನ್ನೇ ಕೇಳಬೇಕು. ಅವರೇ ಹೇಳಿದ್ದಾರೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಇಲ್ಲ ಎಂದು ಹೇಳಿದ್ದಾರೆ. ಆದರೂ ಅದೇ ವಿಷಯದ ಬಗ್ಗೆ ಗೊಂದಲ ಸೃಷ್ಟಿಸುತ್ತಿದ್ದೀರಿ ಎಂದರು.

ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ ನಾನು ಭೇಟಿಗೆ ಅವಕಾಶ ಕೇಳಿದ್ದೇನೆ. ಆದರೆ ಅವರನ್ನು ಭೇಟಿ ಮಾಡುವ ಸಾಧ್ಯತೆ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಇದ್ದಾರೆ. ಹಾಗಾಗಿ ಅವರನ್ನು ಭೇಟಿ ಮಾಡಲು ಆಗುತ್ತಿಲ್ಲ. ನಮ್ಮ ನಾಯಕರನ್ನು ಭೇಟಿ ಮಾಡುವುದು ತಪ್ಪೇ? ಎಂದು ಅವರು ಹೇಳಿದರು.

RELATED ARTICLES
- Advertisment -
Google search engine

Most Popular