Wednesday, December 24, 2025
Google search engine

Homeಬ್ರೇಕಿಂಗ್ ನ್ಯೂಸ್ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಕೆಶಿ

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಕೆಶಿ

ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದು, ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ ಅಂಗಳಕ್ಕೆ ಚೆಂಡು ಎಸೆದರೆ ಡಿಕೆಶಿ ನಾನು ಹೈಕಮಾಂಡ್‌ನವರಿಗೆ ತೊಂದರೆ ಕೊಡಲು ಹೋಗುವುದಿಲ್ಲ ಎಂದಿದ್ದಾರೆ.

ಈ ವಿಚಾರವಾಗಿ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ರಾಹುಲ್‌ಗಾಂಧಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ಹೇಳಿದ್ದು, ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡಿಲ್ಲ. ವಿದೇಶದಿಂದ ರಾಹುಲ್‌ ಗಾಂಧಿ ನಿನ್ನೆ ಆಗಮಿಸಿದ್ದು ಅವರಿಗೆ ಈಗ ತೊಂದರೆ ನೀಡಲು ಹೋಗುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನ್ನಾಗಿ ಇರಲು ಇಷ್ಟಪಡುತ್ತೇನೆ ಎಂದು ವೈರಾಗ್ಯದ ಮಾತನ್ನು ಆಡಿದ್ದಾರೆ.

ಇನ್ನೂ ಸಿಎಂ ಬದಲಾವಣೆ ಬಗ್ಗೆ ಯಾವುದೇ ಊಹಾಪೋಹಗಳಿಲ್ಲ. ಬ್ರೇಕ್ ಫಾಸ್ಟ್ ಮೀಟಿಂಗ್ ಬಹಳ ಸಾಮಾನ್ಯ ಪ್ರಕ್ರಿಯೆಯಾಗಿದ್ದು ಎಲ್ಲರ ಜೊತೆಗೂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತೇವೆ. ಶೇರಿಂಗ್ ಕೇರಿಂಗ್ ಬಹಳ ಸಾಮಾನ್ಯ ಎಂದು ತಿಳಿಸಿದರು. ಈ ವೇಳೆ ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರಿಗೆ ಒಳ್ಳೆದಾಗಲಿ ಎಂದಷ್ಟೇ ಉತ್ತರ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular