ಬೆಂಗಳೂರು : ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪದತ್ಯಾಗ ಮಾಡಿರುವ ಸಿದ್ಧರಾಮಯ್ಯ ರಾಷ್ಟ್ರರಾಜಕಾರಣದತ್ತ ಮುಖಮಾಡುತ್ತಾರೆಯೇ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿದಾಯದ ಭಾಷಣದಲ್ಲೇ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.
ರಾಜೀನಾಮೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ. ರಾಷ್ಟ್ರ ರಾಜಕಾರಣಕ್ಕೆ ಆಗಲ್ಲ ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಎಂದು ಹೈಕಮಾಂಡ್ ಗೆ ತಿಳಿಸಿದ್ದೇನೆ. ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ವರಿಷ್ಠರಿಗೆ ಹೇಳಿದ್ದೇನೆ ಹೀಗಾಗಿ ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ನಾನು ಯಾವತ್ತೂ ಕೂಡ ನನ್ನ ಮೌಲ್ಯ ಸಿದ್ದಾಂತದಲ್ಲಿ ರಾಜೀ ಆಗಿಲ್ಲ ಕಟ್ಟ ಕಡೆಯ ವ್ಯಕ್ತಿಗೂ ಅನ್ನ, ವಸತಿ ಶಿಕ್ಷಣ ಒದಗಿಸಬೇಕೆಂಬ ನಂಬಿಕೆ ನಮ್ಮದು. ಒಟ್ಟು 8 ವರ್ಷಗಳ ಕಾಲ ಸಿಎಂ ಆಗಿ ಕೆಲಸ ಮಾಡಿದ್ದೇನೆ . ನಮ್ಮ ಕುಟುಂಬದಲ್ಲಿ ಯಾರೂ ರಾಜಕೀಯದಲ್ಲಿ ಇರಲಿಲ್ಲ ಎಂದರು.



