ತುಮಕೂರು: ತುಮಕೂರಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶ್ರೀಗಳು ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಸಲಹೆ ನೀಡಿದ್ದಾರೆ. “ಮಾತು ಆಡಿದರೆ ಮುತ್ತು ಒಡೆದು ಹೋಗಲಿದೆ” ಎಂದು ಎಚ್ಚರಿಕೆ ನೀಡಿದ ಶ್ರೀಗಳು, ಮುಖ್ಯಮಂತ್ರಿ ಪದಗ್ರಹಣವಾಗುವವರೆಗೂ ಮೌನ ವಹಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಅಜ್ಜಯ್ಯನ ಸೂಚನೆಯಂತೆ ಡಿಕೆ ಶಿವಕುಮಾರ್ ಮೌನ ವಹಿಸಿದ್ದಾರೆ. ಈ ಹಿನ್ನೆಲೆ ಬ್ರೇಕ್‌ಫಾಸ್ಟ್ ಸಭೆಯ ಬಳಿಕ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು. ಬೆಂಬಲಿಗರಿಗೂ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ.
ಇದೇ ವೇಳೆ ನೊಣವಿನಕೆರೆ ಶ್ರೀಗಳು ಬೆಂಗಳೂರಿಗೆ ತೆರಳಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ದೆಹಲಿಗೆ ತೆರಳುವ ಮೊದಲು ಡಿಕೆಶಿ ಎರಡು ಬಾರಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. “ಅಜ್ಜಯ್ಯನ ಅನುಮತಿ ಇಲ್ಲದೆ ಯಾವುದೇ ಕೆಲಸ ಮಾಡುವುದಿಲ್ಲ” ಎಂದು ಅವರು ಈ ಹಿಂದೆ ಹೇಳಿದ್ದರು.



