Friday, July 4, 2025
Google search engine

Homeಅಪರಾಧಕಾನೂನುಅಕ್ರಮ ಆಸ್ತಿ ಪ್ರಕರಣ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಲೋಕಾಯುಕ್ತದಿಂದ ನೋಟಿಸ್ : ಪುತ್ರ...

ಅಕ್ರಮ ಆಸ್ತಿ ಪ್ರಕರಣ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಲೋಕಾಯುಕ್ತದಿಂದ ನೋಟಿಸ್ : ಪುತ್ರ ಕಾಂತೇಶ್, ಸೊಸೆ ಶಾಲಿನಿಗೂ ವಿಚಾರಣೆಗೆ ಸೂಚನೆ

ಶಿವಮೊಗ್ಗ : ಬಿಜೆಪಿಯ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಿ ಎಂದು ಲೋಕಾಯುಕ್ತ ನೋಟಿಸ್ ನೀಡಿದೆ.ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್, ಸೊಸೆ ಶಾಲಿನಿ ವಿರುದ್ಧ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ‌‌. ಲೋಕಾಯುಕ್ತ ಎಸ್​ಪಿ ಕಚೇರಿಗೆ ಇಂದು ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ.

ಕೆ.ಎಸ್‌.ಈಶ್ವರಪ್ಪ ಅವರು ಮಂತ್ರಿಯಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ‌ ಮಾಡಿದ್ದಾರೆಂದು ಆರೋಪಿಸಿ ಶಿವಮೊಗ್ಗದ ವಕೀಲ ವಿನೋದ್ ಎಂಬವರು 2012ರಲ್ಲಿ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ಹೈಕೋರ್ಟ್, 2021ರಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಿತ್ತು.

ನಾಲ್ಕು ವರ್ಷಗಳ ಕಾಲ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆ ನಡೆಸಿತ್ತು.‌ 2025ರ ಏಪ್ರಿಲ್ 5 ರಂದು ಲೋಕಾಯುಕ್ತ ಪೊಲೀಸರಿಗೆ ಎಫ್​ಐಆರ್ ದಾಖಲಿಸಲು ನ್ಯಾಯಾಲಯ ಸೂಚಿಸಿತ್ತು. ಎಫ್​ಐಆರ್ ದಾಖಲಿಸಿ 3 ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಿತ್ತು. ಆದರೆ, ಮೂರು ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಈಶ್ವರಪ್ಪ, ಅವರು ಪುತ್ರ ಮತ್ತು ಸೊಸೆಗೆ ನೋಟಿಸ್ ಜಾರಿ‌ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular