Tuesday, December 16, 2025
Google search engine

Homeಅಪರಾಧಅಕ್ರಮ ಗೋಸಾಗಾಟದ ಪ್ರಕರಣ ದಾಖಲು: ಮನೆ ಹಾಗೂ ಕೊಟ್ಟಿಗೆ ಜಪ್ತಿ

ಅಕ್ರಮ ಗೋಸಾಗಾಟದ ಪ್ರಕರಣ ದಾಖಲು: ಮನೆ ಹಾಗೂ ಕೊಟ್ಟಿಗೆ ಜಪ್ತಿ

ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ತೆರಳಿ KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದ್ರು. ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿದೆ. ವಾಹನದ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ ಆತ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿಸಿದ್ದಾನೆ. ಬಂಟ್ವಾಳ ಸರಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿದೆ. ಮುಂದಿನ ಕಾನೂನುಕ್ರಮಕ್ಕಾಗಿ ಸದ್ರಿ ಜಾನುವಾರು, ಆಟೋ ಹಾಗೂ ಒಂದು ಮೊಬೈಲನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ85/2025, ಕಲಂ: ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆರೋಪಿತ ಭೋಜ ಮೂಲ್ಯರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular