Saturday, June 21, 2025
Google search engine

Homeರಾಜ್ಯಮುಂದಿನ ವರ್ಷದಿಂದ 1-10ನೇ ತರಗತಿ ಮಕ್ಕಳಿಗೆ ಮೌಲ್ಯ ಶಿಕ್ಷಣ ಜಾರಿ: ಸಚಿವ ಮಧು ಬಂಗಾರಪ್ಪ

ಮುಂದಿನ ವರ್ಷದಿಂದ 1-10ನೇ ತರಗತಿ ಮಕ್ಕಳಿಗೆ ಮೌಲ್ಯ ಶಿಕ್ಷಣ ಜಾರಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ೧ ರಿಂದ ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯ ಶಿಕ್ಷಣ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದಲ್ಲಿ ೧ ರಿಂದ ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ದೈನಂದಿನ ವಿದ್ಯಾಮನಗಳಿಗೆ ಸಂಬಂಧಿಸಿದಂತೆ ಮೌಲ್ಯ ಶಿಕ್ಷಣ ನೀಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯಾದ್ಯಂತ ಇದನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಶಾಲೆಗಳಲ್ಲಿ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುವುದು. ಈ ತರಗತಿಯಲ್ಲಿ ಸಂಚಾರ ನಿಯಮಗಳು, ಆರೋಗ್ಯ ಮಾಹಿತಿ, ಪರಿಸರ ಸಂರಕ್ಷಣೆ, ಕೃಷಿ ಸೇರಿ ಸಾಮಾನ್ಯ ಜ್ಞಾನ ಸೇರಿ ವಿವಿಧ ವಿಷಯಗಳ ಕುರಿತು ಪಾಠ ಹೇಳಿಕೊಡಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular