Tuesday, May 20, 2025
Google search engine

Homeವಿದೇಶಫ್ಲೋರಿಡಾದಲ್ಲಿ ೧೪ಕ್ಕಿಂತ ಕಡಿಮೆ ವಯಸ್ಸಿನವರು ಸಾಮಾಜಿಕ ಜಾಲತಾಣ ಸೇರುವಂತಿಲ್ಲ

ಫ್ಲೋರಿಡಾದಲ್ಲಿ ೧೪ಕ್ಕಿಂತ ಕಡಿಮೆ ವಯಸ್ಸಿನವರು ಸಾಮಾಜಿಕ ಜಾಲತಾಣ ಸೇರುವಂತಿಲ್ಲ

ಫ್ಲೋರಿಡಾ: ಅಮೆರಿಕದ ಫ್ಲೋರಿಡಾದಲ್ಲಿ ೧೪ಕ್ಕಿಂತ ಕಡಿಮೆ ವಯಸ್ಸಿನವರು ಮುಂದಿನ ವರ್ಷದಿಂದ ಸಾಮಾಜಿಕ ಜಾಲತಾಣ ಸೇರುವಂತಿಲ್ಲ. ಈ ಸಂಬಂಧದ ಕಾನೂನಿಗೆ ಗವರ್ನರ್ ರಾನ್ ಡೆಸ್ಯಾಂಟಿಸ್ ಸಹಿ ಮಾಡಿದ್ದಾರೆ. ೧೪ ವರ್ಷಕ್ಕಿಂತ ಕೆಳ ವಯಸ್ಸಿನವರ ಎಲ್ಲ ಖಾತೆಗಳನ್ನು ಕಿತ್ತುಹಾಕುವಂತೆ ಈಗಾಗಲೇ ಎಲ್ಲ ಸಾಮಾಜಿಕ ಜಾಲತಾಣ ಕಂಪನಿಗಳಿಗೆ ಸೂಚನೆ ನೀಡಲಾಗಿದೆ.

ಹೊಸ ಕಾನೂನಿನ ಅನ್ವಯ ೧೪ ರಿಂದ ೧೫ ವರ್ಷದೊಳಗಿನ ಮಕ್ಕಳು ಇನ್‌ಸ್ಟಾಗ್ರಾಂ ಮತ್ತು ಸ್ನ್ಯಾಪ್‌ಚಾಟ್‌ನಂಥ ಸಾಮಾಜಿಕ ಜಾಲತಾಣ ಖಾತೆಗಳನ್ನು ಹೊಂದಲು ಪೋಷಕರ ಒಪ್ಪಿಗೆ ಪಡೆಯುವುದು ಕಡ್ಡಾಯ. ಖಾತೆಯನ್ನು ಕಿತ್ತುಹಾಕಲು ಸಾಮಾಜಿಕ ಜಾಲತಾಣ ಕಂಪನಿಗಳು ವಿಫಲವಾದಲ್ಲಿ, ಮಕ್ಕಳ ಪರವಾಗಿ ದಾವೆ ಹೂಡಲಾಗುವುದು ಹಾಗೂ ೧೦ ಸಾವಿರ ಡಾಲರ್ ವರೆಗೆ ಪರಿಹಾರವನ್ನು ಮಕ್ಕಳಿಗೆ ನೀಡಲಾಗುತ್ತದೆ. ಕಂಪನಿಗಳಿಗೆ ೫೦ ಸಾವಿರ ಡಾಲರ್ ವರೆಗೂ ದಂಡ ವಿಧಿಸಬಹುದಾಗಿದೆ.

RELATED ARTICLES
- Advertisment -
Google search engine

Most Popular