ಕೆ.ಆರ್.ಪೇಟೆ: ಕೆ.ಆರ್.ಪೇಟೆ ತಾಲೂಕಿನ ಕಟ್ಟಹಳ್ಳಿಯಲ್ಲಿ ಏತ ನೀರಾವರಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಕಟ್ಟಹಳ್ಳಿಯಿಂದ ಐಚನಹಳ್ಳಿವರೆಗಿನ 50 ಹಳ್ಳಿಗಳ ಕೆರೆ ತುಂಬಿಸುವ ಮೊದಲ ಹಂತದ ಯೋಜನೆ ಇದಾಗಿದ್ದು, ಸಚಿವ ಎನ್.ಚಲುವರಾಯಸ್ವಾಮಿ ಯೋಜನೆಗೆ ಚಾಲನೆ ನೀಡಿದರು.
ಬಳಿಕ ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಟಿ.ಮಂಜು ಸೇರಿದಂತೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಭಾಗಿಯಾಗಿದ್ದರು.