Friday, January 30, 2026
Google search engine

Homeಅಪರಾಧ5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 5 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗಲೇ ಪೊಲೀಸ್ ಇನ್ಸ್ ಪೆಕ್ಟರ್  ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನಗರದ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದವರು. ಇದೀಗ ಗೋವಿಂದರಾಜು ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಚೀಟಿ ವ್ಯವಹಾರ ಕೇಸ್  ನಲ್ಲಿ ಲಂಚ ಪಡೆಯುವ ವೇಳೆ  ಸಿಕ್ಕಿಬಿದ್ದಿದ್ದಾರೆ.

ವ್ಯಕ್ತಿಯೊಬ್ಬರನ್ನು ಚೀಟಿ ವ್ಯವಹಾರದ ಪ್ರಕರಣದಲ್ಲಿ ಸೇರಿಸುವುದಾಗಿ  ಹೇಳಿ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಣ ಪಡೆಯುತ್ತಿದ್ದ  ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಇನ್ಸ್ ಪೆಕ್ಟರ್  ಗೋವಿಂದರಾಜು ಅವರನ್ನು ಬಂಧಿಸಿದ್ದಾರೆ.

 

RELATED ARTICLES
- Advertisment -
Google search engine

Most Popular