ಮಂಗಳೂರು(ದಕ್ಷಿಣ ಕನ್ನಡ): ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳ ಸಂಬಂಧ ಹೂತು ಹಾಕಲಾಗಿದೆ ಎನ್ನಲಾದ ಆರೋಪದ ಪ್ರಕರಣದ ಸಾಕ್ಷಿ ದೂರುದಾರ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ತೋರಿಸಿದ ಆರನೇ ಜಾಗದಲ್ಲಿ ಗುರುವಾರ ಮೃತದೇಹದ ಅವಶೇಷಗಳು ಪತ್ತೆಯಾಗಿದೆ.
ವಿಧಿವಿಜ್ಞಾನ ತಜ್ಞರ ತಂಡವು ಸ್ಥಳದಲ್ಲೇ ಇದ್ದು, ಮೃತದೇಹದ ಅವಶೇಷಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸಿತು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹ ಪತ್ತೆಗಾಗಿ ಜಾಗ ಅಗೆಯುವ ಕಾರ್ಯವು ಸತತ ಮೂರನೇ ದಿನವಾದ ಗುರುವಾರ ಬೆಳಿಗ್ಗೆ ಆರಂಭವಾಯ್ತು. ಎಸ್ಐಟಿ ತಂಡದ ಜೊತೆ ಸುಮಾರು 20 ಕಾರ್ಮಿಕರು ನೇತ್ರಾವತಿ ನದಿ ಪಕ್ಕದ ಕಾಡಿನ ಒಳಗೆ ತೆರಳಿ, ಅಗೆಯುವ ಕಾರ್ಯದಲ್ಲಿ ತೊಡಗಿದ್ದರು.