ಮಂಗಳೂರು (ದಕ್ಷಿಣ ಕನ್ನಡ) : ರಾಜ್ಯದಲ್ಲಿ ಜಾತಿ ಜನಗಣತಿಯ ಬಗ್ಗೆ ಸಮರ್ಪಕವಾಗಿ ಜನಸಾಮಾನ್ಯರಿಗೆ ಮಾಹಿತಿ ನೀಡದೆ ಸಮೀಕ್ಷೆ ನಡೆಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜಿಲ್ಲೆಯ ಜನರಿಗೆ ಮುಂಚಿತವಾಗಿ ಮಾಹಿತಿ ನೀಡಿ ಪೂರ್ವ ತಯಾರಿಯೊಂದಿಗೆ ಸಮೀಕ್ಷೆ ಆರಂಭಿಸುವುದು ಸೂಕ್ತ. ತರಾತುರಿಯಲ್ಲಿ ಸಮೀಕ್ಷೆ ನಡೆಸುವ ಬದಲು ಸಮೀಕ್ಷೆಯನ್ನು ಮುಂದೂಡುವುದು ಸೂಕ್ತ ಎಂದರು.
ಸುದ್ದಿ ಗೋಷ್ಠಿ ಯಲ್ಲಿ ಉಪಸ್ಥಿತರಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಈ ಸಮೀಕ್ಷೆಯ ಬಗ್ಗೆ ಸಾಕಷ್ಟು ಗೊಂದಲವಿರುವಂತೆ ಕಾಣುತ್ತಿದೆ. ಇದರಲ್ಲಿ ಕಾಂಗ್ರೆಸ್ ನ ಹಿಡನ್ ಅಜೆಂಡಾ ಇದ್ದಂತಿದೆ ಎಂದು ಆರೋಪಿಸಿದರು.