Wednesday, November 26, 2025
Google search engine

Homeರಾಜ್ಯಸುದ್ದಿಜಾಲಸಂವಿಧಾನವನ್ನು ಗೌರವಿಸುವ ಜೊತೆಗೆ ಕಾನೂನುಗಳನ್ನು ಪಾಲಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ-ಉಮ್ಮತ್ತೂರು ಇಂದುಶೇಖರ್

ಸಂವಿಧಾನವನ್ನು ಗೌರವಿಸುವ ಜೊತೆಗೆ ಕಾನೂನುಗಳನ್ನು ಪಾಲಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ-ಉಮ್ಮತ್ತೂರು ಇಂದುಶೇಖರ್

ಚಾಮರಾಜನಗರ : ಸಂವಿಧಾನ ಜನರ ಜೀವನಾಡಿಯಾಗಿದ್ದು,ದೇಶದ ಸಂವಿಧಾನವನ್ನು ಗೌರವಿಸುವ ಜೊತೆಗೆ ಕಾನೂನುಗಳನ್ನು ಪಾಲಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ತಿಳಿಸಿದರು.

ತಾಲೂಕಿನ ಅಮಚವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಶ್ವಾರ್ಚನೆ ನೆರವೇರಿಸಿ ಮಾತಾನಾಡಿದರು.

1949 ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕಾರ ಮಾಡಲಾಯಿತು.ನಂತರ 1950 ಜನವರಿ 26 ರಂದು ಜಾರಿಗೆ ತರಲಾಯಿತು.ಡಾ. ಬಿ. ಆರ್. ಅಂಬೇಡ್ಕರ್ ಅವರ ಪರಿಶ್ರಮದಿಂದ ದೇಶಕ್ಕೆ ಉತ್ತಮ ಸಂವಿಧಾನ ರಚಯಾಗಿದೆ.

ಸಂವಿಧಾನದಲ್ಲಿ ಪ್ರಯೊಬ್ಬರಿಗೂ ಹಕ್ಕುಗಳನ್ನು ನೀಡಲಾಗಿದ್ದು,ಅವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.ಜನರು ಹಕ್ಕುಗಳನ್ನು ಅನುಭವಿಸುವಂತೆ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.

ಉಪನ್ಯಾಸಕ ಸುರೇಶ್ ಎನ್ ಋಗ್ವೇದಿ ಮಾತನಾಡಿ ಡಾ. ಅಂಬೇಡ್ಕರ್ ವಿಶ್ವದ ಜ್ಞಾನ ಭಂಡಾರ. ಅವರು ಕೊಟ್ಟಿರುವ ಸಂವಿಧಾನ ವಿಶಿಷ್ಟ, ವಿಭಿನ್ನವಾಗಿದೆ.ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾಗಿದೆ ಎಂದರು.

ಜಿಲ್ಲಾ ಪಂಚಾಯತ್ ತರಬೇತಿ ಸಂಯೋಜಕ ಟಿ. ಜೆ. ಸುರೇಶ್ ಮಾತನಾಡಿ ಸಂವಿಧಾನ ಒಂದು ಸಮುದಾಯಕ್ಜೆ ಸೀಮಿತವಾಗಿಲ್ಲ. ಭಾರತೀಯರೆಲ್ಲರಿಗೂ ಸೇರಿದ್ದು, ಪ್ರತಿಯೊಬ್ಬರೂ ಸಂವಿಧಾನದ ಪೀಠಕೆಯನ್ನು ಅರ್ಥೈಸಿಕೊಂಡು ಪರಿಪಾಲಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಇಲಾಖೆಯ ತ್ರಿವೇಣಿ ಮಾತಾನಾಡಿ ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಹಲವು ಹಕ್ಕುಗಳನ್ನು ನೀಡಲಾಗಿದೆ. ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಶಿವನಂಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿಯೊಬ್ಬರೂ ಸಂವಿಧಾನವನ್ನು ಅರಿತು ಸಮಾಜದಲ್ಲಿ ಸಮಾನತೆಯಿಂದ ಬಾಳಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಮೂರ್ತಿ, ಬಸವಣ್ಣ, ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾವ್ಯ ಇದ್ದರು.

RELATED ARTICLES
- Advertisment -
Google search engine

Most Popular