ಬೆಂಗಳೂರು : ಬೆಂಗಳೂರಿನಲ್ಲಿ ಸಚಿವ ಕೆಜೆ ಜಾರ್ಜ್ ಆಪ್ತರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಕಳೆದ ಮೂರು ದಿನಗಳಿಂದ ಕೆಜೆ ಜಾರ್ಜ್ ಇಬ್ಬರು ಆಪ್ತರ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಸಚಿವ ಕೆಜೆ ಜಾರ್ಜ್ ಆಪ್ತರ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿದೆ. ಆಪ್ತರಾದ ಜಿತು ಹಾಗೂ ಕೋಠಾರಿ ಎನ್ನುವವರ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಎಲೆಕ್ಟ್ರಿಕ್ ಗುತ್ತಿಗೆದಾರರಾಗಿರುವ ಜಿತು ಮತ್ತು ಕೋಠಾರಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.