ಮಂಗಳೂರು (ದಕ್ಷಿಣ ಕನ್ನಡ): ರಾಜ್ಯ ರಾಜಧಾನಿ ಬೆಂಗಳೂರು ಹೊರತುಪಡಿಸಿ ಈಗಾಗಲೇ ಚಾಮರಾಜನಗರ, ನಂದಿಹಿಲ್ಸ್, ಕಲಬುರ್ಗಿಯಲ್ಲಿ ಈಗಾಗಲೇ ಸಚಿವ ಸಂಪುಟ ಸಭೆ ನಡೆದಿದ್ದು, ವಿಜಯಪುರದಲ್ಲಿ ಮುಂದಿನ ಸಚಿವ ಸಂಪುಟ ಸಭೆ ನಡೆಯಲಿದೆ. ಬಳಿಕ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.
ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಾಲಿಕೆ ಕಟ್ಟಡದಲ್ಲಿರುವ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತಾಡಿದ ಅವರು, ಉತ್ತರ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಭಾಗದಲ್ಲಿ ಸಂಪುಟ ಸಭೆ ನಡೆದರೆ ಅನುಕೂಲವಾಗಲಿದೆ ಎಂದರು.