Saturday, May 24, 2025
Google search engine

Homeರಾಜಕೀಯಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಜನಾರ್ದನ ರೆಡ್ಡಿ

ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಜನಾರ್ದನ ರೆಡ್ಡಿ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಪಕ್ಷದ ಹಲವಾರು ಸದಸ್ಯರೊಂದಿಗೆ ಬಿಜೆಪಿ ಸೇರುತ್ತಿರುವುದಾಗಿ ಗಣಿ ಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಕೆಆರ್‌ ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿಅವರಿಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್‌ ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನನ್ನ ರಕ್ತದ ಕಣ ಕಣದಲ್ಲಿ ಬಿಜೆಪಿ ಇದೆ

ಬಿಜೆಪಿ ಸೇರ್ಪಡೆ ಬಳಿಕ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, ನನ್ನ ರಕ್ತದ ಕಣ ಕಣದಲ್ಲಿ ಬಿಜೆಪಿ ಇದೆ ಎಂದರು.

ಬಿಜೆಪಿ ಪಕ್ಷದ ಜೊತೆ ಕೆಆ ರ್​ಪಿಪಿ ಪಕ್ಷವನ್ನು ವಿಲೀನ ಮಾಡುತ್ತಿದ್ದೇನೆ. ಬಿ ಎಸ್​ ಯಡಿಯೂರಪ್ಪ ಆಶೀರ್ವಾದ, ಬಿವೈ ‌ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷಕ್ಕೆ ‌ಸೇರಿದ್ದೇನೆ. ಕೇಂದ್ರ ಸಚಿವ ಅಮಿತ್ ಶಾ ಅವರು ನನಗೆ ಪಕ್ಷಕ್ಕೆ ಬನ್ನಿ ಅಂದರು. ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಬಿಎಸ್​ ಯಡಿಯೂರಪ್ಪ ಕಾರಣ. ಅವರು ಮುಖ್ಯಮಂತ್ರಿಯಾಗಿದ್ದಾಗ, ನನಗೆ ಸಚಿವ ಸ್ಥಾನ ಕೊಟ್ಟಿದ್ದರು. ಈಗ ಅವರ ಸುಪುತ್ರ ಇದ್ದಾರೆ. ತಂದೆ ಮಗನ ಜೊತೆ ಈಗ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಾನು ಯಾವ ಷರತ್ತು ಇಲ್ಲದೆ ಕಾರ್ಯಕರ್ತನಾಗಿ ಬಿಜೆಪಿಗೆ ಸೇರಿದ್ದೇನೆ. ಯಾವದೆ ಹುದ್ದೆಯ ಆಕಾಂಕ್ಷೆ ನನಗೆ ಇಲ್ಲ ಎಂದು ತಿಳಿಸಿದರು.

ಮೂರನೇ ಬಾರಿ ನರೇಂದ್ರ ಮೋದಿಯವರನ್ನ ಪ್ರಧಾನಿ ಮಾಡಲು ಕೆಲಸ ಮಾಡುತ್ತೇನೆ. ನನ್ನ ಆತ್ಮೀಯ ಗೆಳೆಯ ಶ್ರೀರಾಮುಲು ಸೇರಿ ಎಲ್ಲರಿಗೂ ಧನ್ಯವಾದ. ಭಾತರವನ್ನು ವಿಶ್ವಗುರು ಮಾಡಿರುವ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಹೇಳಿದರು.

RELATED ARTICLES
- Advertisment -
Google search engine

Most Popular